Samayanews.

Samayanews.

2024-11-15 07:36:18

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಖಾಲಿ ಆಗುವ ಕಾಯಂ ಹುದ್ದೆ ಭರ್ತಿ ಮಾಡಬೇಕು: ಸರ್ಕಾರಗಳಿಗೆ ಹೈಕೋರ್ಟ್​ ನಿರ್ದೇಶನ

ಬೆಂಗಳೂರು: ದೇಶದಲ್ಲಿ ನಿರುದ್ಯೋಗ ಸಮಸ್ಯೆ ಇಡೀ ವ್ಯವಸ್ಥೆಯನ್ನು ಕಾಡುತ್ತಿದೆ. ಸಾರ್ವಜನಿಕ ವಲಯದ ಉದ್ದಿಮೆಗಳಲ್ಲಿ ನಿಧನ, ನಿವೃತ್ತಿ ಮತ್ತಿತರ ಕಾರಣಗಳಿಂದಾಗಿ ಖಾಲಿ ಆಗುವ ಕಾಯಂ ಹುದ್ದೆಗಳನ್ನು ಕಾಲ ಕಾಲಕ್ಕೆ ಭರ್ತಿ ಮಾಡಲು ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.

ಕೇಂದ್ರ ಸರ್ಕಾರದ ಅಧೀನದ ಎಲ್‌ಐಸಿ ಸಂಸ್ಥೆಯ ನೇಮಕಾತಿಗೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾಯಮೂರ್ತಿ ವಿಜಯಕುಮಾರ್ ಎ. ಪಾಟೀಲ್ ಅವರಿದ್ದ ಧಾರವಾಡ ವಿಭಾಗೀಯ ಪೀಠ ಈ ಅದೇಶ ನೀಡಿದೆ.

ಸಿಬ್ಬಂದಿ ನಿಧನ, ವಿಕಲಾಂಗತೆ, ನಿವೃತ್ತಿ ಅಥವಾ ವಜಾಗೊಳಿಸಿದ ಪ್ರಕರಣಗಳಲ್ಲಿ ಹುದ್ದೆಗಳು ಖಾಲಿಯಾಗುತ್ತವೆ. ಅವುಗಳನ್ನು ಅನಿರ್ದಿಷ್ಟಾವಧಿಗೆ ಹಾಗೆಯೇ ಬಿಟ್ಟರೆ ಅದು ಸಾರ್ವಜನಿಕ ಆಡಳಿತದ ಮೇಲೆ ಪರಿಣಾಮ ಬೀರುವ ಜೊತೆಗೆ ಹಲವು ಅರ್ಹರು ಅನರ್ಹರಾಗುತ್ತಾರೆ. ಅವರ ವಯೋಮಿತಿ ಮೀರುತ್ತದೆ. ಕಾಲ ಕಾಲಕ್ಕೆ ನೇಮಕಾತಿ ಪ್ರಕ್ರಿಯೆ ನಡೆಯದ ಹಿನ್ನೆಲೆಯಲ್ಲಿ ನಿಜಕ್ಕೂ ಉದ್ಯೋಗಕ್ಕೆ ಅರ್ಹರಾಗಿರುವ ಯುವ ಜನಾಂಗ ಸಮಸ್ಯೆಗೆ ಗುರಿಯಾಗುತ್ತಿದ್ದಾರೆ. ನೇಮಕಾತಿ ಪ್ರಕ್ರಿಯೆ ಮಾಡದಿರುವುದರಿಂದ ಸಂವಿಧಾನ ಖಾತ್ರಿಪಡಿಸಿರುವ ಸಾರ್ವಜನಿಕ ಉದ್ಯೋಗದ ಅವಕಾಶದಿಂದ ಬಹುದೊಡ್ಡ ಸಂಖ್ಯೆಯ ಯುವಜನತೆ ವಂಚಿತವಾಗುತ್ತಿದೆ ಎಂದು ಪೀಠ ಆದೇಶದಲ್ಲಿ ತಿಳಿಸಿದೆ.

ವಿಶೇಷವಾಗಿ ನಿರುದ್ಯೋಗ ಸಮಸ್ಯೆ ನಮ್ಮ ವ್ಯವಸ್ಥೆಯನ್ನು ಕಾಡುತ್ತಿರುವ ಕಾಲಘಟ್ಟದಲ್ಲಿ ಖಾಲಿ ಹುದ್ದೆಗಳಿಗೆ ನಿಯಮಿತವಾಗಿ ಭರ್ತಿ ಮಾಡುವಂತಹ ಕೆಲಸ ಆಗಬೇಕು. ವಯೋಮಿತಿ ಮುಗಿಯುವ ಯುವಜನತೆಯ ಶಾಪ ಇಡೀ ವ್ಯವಸ್ಥೆಗೆ ತಟ್ಟುತ್ತದೆ. ಈ ಬೆಳವಣಿಗೆಯು ಕಲ್ಯಾಣ ರಾಜ್ಯದಲ್ಲಿ ಒಪ್ಪುವಂತಹದ್ದಲ್ಲ ಎಂದು ಪೀಠ ಹೇಳಿದೆ.

ಪ್ರಕರಣದ ಹಿನ್ನೆಲೆ: ಎಲ್‌ಐಸಿಯಲ್ಲಿ 2020 ರ ಜನವರಿ 14 ರಿಂದ 2022 ರ ಜನವರಿ 14 ರ ಅವಧಿಯಲ್ಲಿ ಖಾಲಿಯಾಗಿದ್ದ ಕಾಯಂ ಹುದ್ದೆಗೆ ಧಾರವಾಡದ ಮಾಳಮಡ್ಡಿಯ ಸೌರಭ ಅವರನ್ನು ನೇಮಕ ಮಾಡುವಂತೆ ಹೈಕೋರ್ಟ್ ಏಕಸದಸ್ಯ ಪೀಠ 2024 ರ ಫೆಬ್ರವರಿ 14 ರಂದು ಆದೇಶ ನೀಡಿತ್ತು. ಅದನ್ನು ಪ್ರಶ್ನಿಸಿ ಎಲ್‌ಐಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಪೀಠ, ಏಕಸದಸ್ಯ ಪೀಠದ ಆದೇಶವನ್ನು ಎತ್ತಿಹಿಡಿದೆ.

img
Author

Post a comment

No Reviews