ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಡೆಂಟ್ ಆಗಿದ್ದ ಚಂದ್ರಶೇಖರ್ (52) ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ನಲ್ಲಿರುವ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಎಂಪಿಎಂನಲ್ಲಿ ಹಣಕಾಸು ವಿಭಾಗದಲ್ಲಿ ಸಹಾಯಕ ವ್ಯವಸ್ಥಾಪಕರಾಗಿದ್ದ ಚಂದ್ರಶೇಖರ್ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೆಲ ತಿಂಗಳ ಹಿಂದೆ ಅವ್ಯವಹಾರ ನಡೆದಿತ್ತು ಎನ್ನಲಾಗಿದೆ. ಈ ಸಂಬಂಧ ಚಂದ್ರಶೇಖರ್ ಮೇಲೆ ಹಲವು ಆರೋಪಗಳು ಕೇಳಿ ಬಂದಿತ್ತು ಎನ್ನಲಾಗಿದೆ. ಸಾರ್ವಜನಿಕ ವಲಯದಲ್ಲಿ ಈ ಕುರಿತು ನಾನಾ ಮಾತುಗಳು ಕೇಳಿ ಬಂದಿದ್ದವು. ಸರಿ ಸುಮಾರು 187 ಕೋಟಿಯಷ್ಟು ಅವ್ಯವಹಾರವಾಗಿ ನಡೆದಿತ್ತು ಎನ್ನಲಾಗಿದ್ದು, ಈ ಸಂಬಂಧ ಹಲವರು ಕಿರುಕುಳ ಕೊಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಇದರಿಂದ ಮನನೊಂದು ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮನೆಯನ್ನು ಪರಿಶೀಲನೆ ಮಾಡಿದಾಗ ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ಹಲವಾರು ವಿಚಾರಗಳನ್ನ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಹಾಗೂ ಇವರಿಗೆ ಆದ ಕಿರುಕುಳಗಳ ಬಗ್ಗೆ ವಿವರವಾಗಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪದ್ಮನಾಭ, ಪರಶುರಾಮ್ ಶುಚಿಸ್ವತ ಎಂಬುವರ ಹೆಸರುಗಳು ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಇದರಲ್ಲಿ ಹಲವು ರಾಜಕಾರಣಿಗಳ ಹೆಸರೂ ಕೂಡ ಇದೆ ಎನ್ನಲಾಗಿದ್ದು. ಹೊರಬರುವ ಸಾಧ್ಯತೆಗಳಿವೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಗೆ ಒಂದಿಷ್ಟು ಹಣ ವರ್ಗಾವಣೆ ಆಗಬೇಕಾಗಿತ್ತು . ಆದರೆ ಬ್ಯಾಂಕ್‌ನವರು ಈ ಬಗ್ಗೆ ಹಲವಾರು ಬಾರಿ ಚರ್ಚಿಸಿದರೂ ಅವರು ಸ್ಪಂದಿಸಿರಲಿಲ್ಲ ಎನ್ನಲಾಗಿದೆ. ಇದರಿಂದ ಖಿನ್ನತೆಗೊಳಗಾದ ಚಂದ್ರಶೇಖರ್ ಅವರ ಕುಟುಂಬದವರಿಗೆ ಈ ಬಗ್ಗೆ ತಿಳಿಸಿದ್ದರು. ಬ್ಯಾಂಕ್ ನವರ ಅಸಡ್ಡೆಗೆ ಹಾಗೂ ಸಹದ್ಯೋಗಿಗಳ ಚುಚ್ಚು ಮಾತಿಗೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಡೆತ್ ನೋಟ್‌ನಲ್ಲಿ ವಿವರವಾಗಿ ಉಲ್ಲೇಖಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Post a comment
Log in to write reviews