ವಾಲ್ಮೀಕಿ ನಿಗಮದ ಅವ್ಯವಹಾರ : ಆರೋಪಿ ನಾಗೇಶ್ವರ್ ರಾವ್ ಮನೆಯಲ್ಲಿ 1.49 ಕೋಟಿ ರೂ. ವಶ
ಬೆಂಗಳೂರು : ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಬಂಧಿತ ಆರೋಪಿ ನಾಗೇಶ್ವರ್ ಮನೆಯಿಂದ ಎಸ್‌ಐಟಿ 1.49 ಕೋಟಿ ಹಣ ವಶಪಡಿಸಿಕೊಳ್ಳಲಾಗಿದ್ದು, ಇಲ್ಲಿಯವರೆಗೆ ಒಟ್ಟು 13.62 ಕೋಟಿ ರೂ. ಜಫ್ತಿ ಮಾಡಳಾಗಿದೆ.
ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ರೂಪಾಯಿ ಹಗರಣದ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ, ಆರೋಪಿ ನಾಗೇಶ್ವರ್ ಮನೆಯಿಂದ 1.49 ಕೋಟಿ ರೂ. ವಶಪಡಿಸಿಕೊಂಡಿದ್ದಾರೆ. ಈ ಹಣವನ್ನು ಜಕ್ಕೂರಿನ ಮನೆಯಲ್ಲಿ ಇಡಲಾಗಿತ್ತು.
ಆರೋಪಿ ಸತ್ಯನಾರಾಯಣ್ ವರ್ಮಾ ಎಂಬುವವರನ್ನು ಈ ಹಿಂದೆ ಹೈದರಾಬಾದ್‌ನಲ್ಲಿ ಬಂಧಿಸಲಾಗಿತ್ತು. ಆತನಿಂದ 12 ಕೋಟಿ ರೂ. ನಗದು ಜಪ್ತಿ ಮಾಡಿಕೊಳ್ಳಲಾಗಿತ್ತು. ನಿಗಮದ ಮಾಜಿ ವ್ಯವಸ್ಥಾಪಕನ ಆಪ್ತನ ಬಳಿಯಿಂದ 30 ಲಕ್ಷ ಜಪ್ತಿ ಮಾಡಿಕೊಳ್ಳಲಾಗಿತ್ತು. ಪ್ರಕರಣದಲ್ಲಿ ಒಟ್ಟು 13.62 ಕೋಟಿ ರೂ. ನಗದು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಂಜಿ ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ 18 ಖಾತೆಗಳಿಗೆ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿತ್ತು. ಈ ಸಂಬಂಧ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣ ಸಂಬಂಧ ಸಚಿವರ ಪಾತ್ರ ಖೇಳಿ ಬಂದ ಹಿನ್ನಲೆಯಲ್ಲಿ ಕ್ರೀಡಾ ಸಚಿವ ನಾಗೇಂದ್ರ ಅವರ ತಲೆದಂಡವಾಗಿತ್ತು. ಈ ಪ್ರಕರಣದ ತನಿಖೆ ನಡೆಸಲು ಸರ್ಕಾರ ಎಸ್‌ಐಟಿ ರಚಿಸಿದ್ದು, ಈಗಾಗಲೇ ಆರು ಮಂದಿಯನ್ನು ಬಂಧಿಸಲಾಗಿದೆ.
Post a comment
Log in to write reviews