Samayanews.

Samayanews.

2024-11-15 07:57:57

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ 28ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ : ಬಿ.ವೈ.ವಿಜಯೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಸಂಬಂಧ ಹಣಕಾಸು ಸಚಿವರಾದ ಮುಖ್ಯಮಂತ್ರಿಯವರು ಜವಾಬ್ದಾರಿ ಹೊರಬೇಕು. ಈ ಸಂಬಂಧ ಶರಣಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.
ದೆಹಲಿಯಲ್ಲಿ ಇಂದು (ಜೂನ್‌ 26) ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ 28ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ, ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ಪೋಲಾಗಿದೆ, ಅದರ ದುರ್ಬಳಕೆ ಆಗಿದೆ. ಕಾಂಗ್ರೆಸ್ ಸರ್ಕಾರವು ಈ ಹಣವನ್ನು ದೋಚಿದೆ ಎಂದು ಟೀಕಿಸಿದರು.
ಕರ್ನಾಟಕ ರಾಜ್ಯ ಸರ್ಕಾರವು ಜನರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಆಕ್ಷೇಪಿಸಿದ ಅವರು, ನಿಗಮದ ಹಗರಣ ಸಂಬಂಧ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪತ್ರದನ್ವಯ ಸಿಬಿಐ ತನಿಖೆ ನಡೆಯುತ್ತಿದೆ. ರಾಜ್ಯ ಸರ್ಕಾರ ಆತುರಾತುರವಾಗಿ ಎಸ್‍ಐಟಿಯನ್ನೂ ರಚಿಸಿ ತಮಗೆ ಬೇಕಾದಂತೆ ತನಿಖೆ ನಡೆಸುತ್ತಿದೆ ಎಂದು ಟೀಕಿಸಿದರು.

img
Author

Post a comment

No Reviews