ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳೆದೊಂದು ವಾರದಿಂದ ಅಬ್ಬರಿಸುತ್ತಿರುವ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಬೆಂಗಳೂರಿಗೆ ಇಂದು (ಬುಧವಾರ) ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ
ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಅವರು ಬೆಂಗಳೂರಿನಲ್ಲಿ ಭಾರಿ ಮಳೆ ಇರುವ ಕಾರಣದಿಂದ ನಗರದ ಪ್ರಾಥಮಿಕ, ಫ್ರೌಡಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಎಂದು ಆದೇಶ ಹೊರಡಿಸಿದ್ದಾರೆ. ಇತ್ತ ಮಳೆ ಹೆಚ್ಚಾಗಿದ್ದರ ಪರಿಣಾಮ ಐಟಿ ವಲಯಗಳಿಗೂ ತಟ್ಟಿದ್ದು, ಅಲರ್ಟ್ ಘೋಷಣೆ ಹಿನ್ನೆಲೆ ಹಲವು ಕಂಪನಿಗಳು ತಮ್ಮ ಸಿಬ್ಬಂದಿಗಳ ಹಿತ ದೃಷ್ಟಿಯಿಂದ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಿವೆ. ಹವಾಮಾನ ಇಲಾಖೆಯು ಬುಧವಾರ, ಗುರುವಾರ ಎರಡು ದಿನ ಭಾರಿ ಮಳೆಯ ಬರುವ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಕೊಡಗು ತುಮಕೂರು, ಚಿತ್ರದುರ್ಗ ಸೇರಿದಂತೆ , ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Post a comment
Log in to write reviews