ಬೆಂಗಳೂರು: ನೂತನ ಸಂಸದರು ಜನರ ಧ್ವನಿಯಾಗಿ ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು. ಕಾಂಗ್ರೆಸ್ ಗೆ ಮತ ಹಾಕದವರ ಮನ ಗೆಲ್ಲಬೇಕು ಎಂದು ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಅಂತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ..
ರಾಹುಲ್ ಗಾಂಧಿ 28 ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಜತೆ ಚರ್ಚೆ ಮಾಡಿ, ಲೋಕಸಭೆಗೆ ಆಯ್ಕೆಯಾದ 9 ಸಂಸದರಿಗೆ ಅಭಿನಂದನೆ ಸಲ್ಲಿಸಿ ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು. ಮೊದಲ ಬಾರಿಗೆ ಗೆದ್ದವರು ಕ್ಷೇತ್ರದಿಂದ ದೂರ ಉಳಿಯಬಾರದು. ಬೆಂಗಳೂರು ಹಾಗೂ ದೆಹಲಿಗಿಂತ ಹೆಚ್ಚಾಗಿ ಕ್ಷೇತ್ರದ ಜನರ ಸಂಪರ್ಕದಲ್ಲಿ ಇರಬೇಕು. ನಮ್ಮದೇ ಸರ್ಕಾರ ರಾಜ್ಯದಲ್ಲಿದ್ದು, ಅದರ ನೆರವು ಪಡೆದು ನೂತನ ಸಂಸದರು ಜನರ ಧ್ವನಿಯಾಗಿಬೇಕು.. ತೆರಿಗೆ ಅನ್ಯಾಯ, ಕಳಸಾ ಬಂಡೂರಿ, ಮೇಕೆದಾಟು, ಭದ್ರ ಮೇಲ್ದಂಡೆ ಯೋಜನೆ ಅನುದಾನ, ಹಣಕಾಸು ಆಯೋಗದ ಅನುದಾನ, ಫೆರಿಫೆರಲ್ ರಿಂಗ್ ರಸ್ತೆ ಸೇರಿದಂತೆ ರಾಜ್ಯಕ್ಕೆ ಬರಬೇಕಾದ ಅನುದಾನ ಹಾಗೂ ಯೋಜನೆಗಳು ಮತ್ತು ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು. ಕಾಂಗ್ರೆಸ್‌ಗೆ ಮತ ಹಾಕದವರ ಮನ ಗೆಲ್ಲಬೇಕು ಎಂದು ರಾಹುಲ್ ಗಾಂಧಿ ಅವರು ಸಲಹೆ ನೀಡಿದ್ದಾರೆ ಅಂತ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ..
Post a comment
Log in to write reviews