ನವದೆಹಲಿ: ವಯನಾಡು ಮತ್ತು ರಾಯ್‌ಬರೇಲಿ ಎರಡು ರಾಹುಲ್ ಗಾಂಧಿ ಆಯ್ಕೆಯಾಗಿದ್ದು, ಒಂದು ಕ್ಷೇತ್ರವನ್ನು ಮಾತ್ರ ಉಳಿಸಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.
ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯ ಪಕ್ಷದ ಪ್ರಧಾಣ ಕಾರ್ಯದರ್ಶಿ ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಹುಲ್ ಗಾಂಧಿ ಈ ಎರಡು ಕ್ಷೇತ್ರದಲ್ಲೂ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಮತದಾರರು ಇವರನ್ನು ಒಪ್ಪಿ ಹೆಚ್ಚಿನ ಸಂಖ್ಯೆಯ ಮತಗಳನ್ನು ನೀಡಿದ್ದಾರೆ. ಮುಂದಿನ ರಾಜಕೀಯ ನಡೆ ಗಮನಿಸಿ ಒಂದು ಕ್ಷೇತ್ರಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಲಿದ್ದಾರೆ. ಮುಂದಿನ ಐದಾರು ದಿನಗಳಲ್ಲಿ ಈ ಬಗ್ಗೆ ರಾಹುಲ್ ಗಾಂಧಿ ಅವರೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಜೂನ್ 17 ರ ಮೊದಲು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.
ರಾಹುಲ್ ಗಾಂಧಿ ಈ ಹಿಂದಿನ 2019 ರ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ಅಮೇಠಿ ಕ್ಷೇತ್ರ ಮತ್ತು ಕೇರಳದ ವಯನಾಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಕಳೆದ ಬಾರಿ ಅಮೇಠಿ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಸೋಲು ಒಪ್ಪಿಕೊಳ್ಳಬೇಕಾಗಿತ್ತು. ಈ ಬಾರಿ ವಯನಾಡು ಹಾಗೂ ರಾಯಬರೇಲಿ ಕ್ಷೇತ್ರದಲ್ಲಿ ಸಾಕಷ್ಟು ಮತಗಳ ಅಂತರದಿಂದ ರಾಹುಲ್ ಗೆಲುವನ್ನು ಸಾಧಿಸಿದ್ದಾರೆ. ಅಲ್ಲದೆ ಕಾಂಗ್ರೆಸ್‌ನ ಸಂಸಧೀಯ ಮಂಡಳಿಯ ಸಭೆಯಲ್ಲಿ ವಿಪಕ್ಷದ ನಾಯಕರಾಗಿಯೂ ಆಯ್ಕೆಯಾಗಿದ್ದಾರೆ. ಆದರೆ, ಕ್ಷೇತ್ರಗಳ ವಿಚಾರ ಹಾಗೂ ವಿಪಕ್ಷ ಸ್ಥಾನದ ಬಗ್ಗೆ ಇನ್ನೂ ರಾಹುಲ್ ತನ್ನ ನಿರ್ಧಾರವನ್ನು ಪ್ರಕಟಿಸಿಲ್ಲ.
Post a comment
Log in to write reviews