Samayanews.

Samayanews.

2024-12-24 12:55:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪತಿಯ ಅನೈತಿಕ ಸಂಬಂಧಕ್ಕೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ ಪತ್ನಿ

ಬೆಂಗಳೂರು:  ಮಹಿಳೆಯೊಬ್ಬರು ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿರುವ ಘಟನೆ ಹುಳಿಮಾವು ಸಮೀಪದ ಅಕ್ಷಯನಗರದಲ್ಲಿ ನಡೆದಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಅನುಷಾ ಮೃತ ದುರ್ದೈವಿ. ಎರಡು‌ ದಿನದ ಹಿಂದೆ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ಅನುಷಾಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಬೆಂಕಿ ಕೆನ್ನಾಲಿಗೆ ಸುಟ್ಟು ಕರಕಲಾಗಿದ್ದ ಅನುಷಾ ಸಾವು-ಬದುಕಿನ ಮಧ್ಯೆ ಹೋರಾಡಿ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅನುಷಾ ಐದು ವರ್ಷಗಳ ಹಿಂದೆ ಶ್ರೀಹರಿ ಎಂಬಾತನ ಜತೆಗೆ ವಿವಾಹವಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗುವೂ ಇದೆ. ಇತ್ತೀಚೆಗೆ ಪತಿ ಶ್ರೀಹರಿಗೆ ಮತ್ತೊಬ್ಬಳ ಜತೆಗೆ ಅನೈತಿಕ ಸಂಬಂಧ ಇದೆ ಎಂದು ಅನುಷಾ ಅನುಮಾನಿಸಿದ್ದಳು. ಇದೇ ವಿಚಾರಕ್ಕೆ ಇಬ್ಬರ ನಡುವೆ ಮನಸ್ತಾಪ ಉಂಟಾಗಿ, ಆಗಾಗ ಜಗಳ ನಡೆಯುತ್ತಿತ್ತು. ಇದರಿಂದ ಮನನೊಂದ ಅನುಷಾ ಬಾತ್ ರೂಂನಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ಆಕೆಯ ಕಿರುಚಾಟ ಕೇಳಿ ಬಂದ ಕುಟುಂಬಸ್ಥರು ಕೂಡಲೇ ಬಾಗಿಲು ಮುರಿದು ಬೆಂಕಿ ನಂದಿಸಿ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅನುಷಾ ಮೃತಪಟ್ಟಿದ್ದಾಳೆ.

ಸದ್ಯ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಪೊಲೀಸರು ತನಿಖೆಯನ್ನು‌ ನಡೆಸುತ್ತಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ತಾಯಿ ಇಲ್ಲದೆ ಮಗುವು ತಬ್ಬಲಿಯಾಗಿದೆ.

 

img
Author

Post a comment

No Reviews