ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸೋಲನ್ನು ವಿನಯ ಪೂರ್ವಕವಾಗಿ ಸ್ವೀಕರಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಬೆಳಗಾವಿಯ ಚುನಾವಣಾ ಫಲಿತಾಂಶ ಗಮನಿಸಿದರೆ ಬಿಜೆಪಿ ಹಾಗೂ ಎಂಇಎಸ್ ಒಂದಾದಂತೆ ಮೇಲ್ನೋಟಕ್ಕೆ ಕಾಣುತ್ತಿದೆ. ಕಳೆದ 25 ವರ್ಷಗಳಿಂದಲೂ ಬೆಳಗಾವಿಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಎಂಇಎಸ್ ನಡುವೆ ತ್ರಿಕೋನ ಸ್ಪರ್ಧೆ ಇತ್ತು. ಕಾಂಗ್ರೆಸ್ ಗೆಲುವಿಗೆ ಮೊದಲಿನಿಂದಲೂ ಉತ್ತಮ ವಾತಾವರಣ ಹಾಗೂ ಜನಬೆಂಬಲ ಕೂಡ ವ್ಯಕ್ತವಾಗಿತ್ತು. ಆದರೂ ಈ ಬಾರಿ ಗೆಲುವು ಸಾಧಿಸಲು ಆಗಿಲ್ಲ. ಸೋಲಿಗೆ ಅನೇಕ ಕಾರಣಗಳಿವೆ ಸೋಲನ್ನು ವಿನಯ ಪೂರ್ವಕವಾಗಿ ಸ್ವೀಕರಿಸುವೆ ಎಂದರು.
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಸೋಲಿನ ಬಗ್ಗೆ ಹೈಕಮಾಂಡ್ ಪರಾಮರ್ಶೆ ಸಮಿತಿ ರಚಿಸಿರುವ ವರದಿ ಬಗ್ಗೆ ನನಗೆ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲದಿರಬಹುದು. ಆದರೆ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಜನರ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಸ್ವಾರ್ಥ ಬಿಟ್ಟು ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ ಎಂದರು.
ಕ್ಷಮೆ ಕೇಳುವುದು ಸಿಎಂ ಗೆ ಇರುವ ದೊಡ್ಡ ಗುಣ
ಭಾನುವಾರ ಬೆಳಗಾವಿ ನಾಯಕರ ಭೇಟಿ ವೇಳೆ, ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಇದು ಕೇಳಿದ್ದು ಮುಖ್ಯಮಂತ್ರಿಯವರ ದೊಡ್ಡ ಗುಣ ಎಂದರು.
Post a comment
Log in to write reviews