ತಮಿಳುನಾಡು: ಕಾರು ಮತ್ತು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ಲ್ಲಿದ್ದ ಮಹಿಳಾ ಪೇದೆ 30 ಅಡಿ ದೂರಕ್ಕೆ ಹೋಗಿ ಬಿದ್ದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
ನಿಯಂತ್ರಣ ತಪ್ಪಿದ ಕಾರು ಮುಂಭಾಗದಿಂದ ಬರುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ನಲ್ಲಿದ್ದ ಮಹಿಳಾ ಪೇದೆ 30 ಅಡಿ ದೂರಕ್ಕೆ ಹೋಗಿ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಹಿಳಾ ಪೇದೆಯನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ತಿರುಮಲೈವಾಯಲ್ ನಿವಾಸಿಯಾದ ಪವಿತ್ರಾ ಪೋರೂರ್ [24] ಮಹಿಳಾ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೆಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಬುಧವಾರ ಕರ್ತವ್ಯ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
Post a comment
Log in to write reviews