ದೆಹಲಿ: ಎನ್‌ಡಿಎ ನಾಯಕನಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ, ಶನಿವಾರ ಅಂದರೆ ಜೂನ್ 8 ರಂದು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ ನೀಡಲಾಗಿದ್ದು, ಹಲವು ವಿದೇಶಿ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.. ಈಗಾಗಲೇ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾದ ಪ್ರಧಾನಿ ನಿಲ್ ವಿಕ್ರಮಸಿಂಘೆ ಅವರು ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ. ಇನ್ನು ಕಾರ್ಯಕ್ರಮಕ್ಕೂ ಮುಂದಿನ ದಿನ ಅಂದರೆ ಜೂ. 7ಕ್ಕೆ ಭಾರತಕ್ಕೆ ಬರಲಿದ್ದಾರೆ ಎಂದು ಹೇಳಲಾಗಿದೆ.
ಗಣ್ಯ ನಾಯಕಕರಿಗೆ ಆಹ್ವಾನ
ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಯಾವೆಲ್ಲಾ ನಾಯಕರಿಗೆ ಆಹ್ವಾನ ನೀಡಲಾಗಿದೆ ಎನ್ನುವುದನ್ನು ನೋಡುವುದಾದರೆ ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್, ಭೂತಾನ್ ಪ್ರಧಾನಿ ಕೌಂಟರ್ ಟ್ಶೆರಿಂಗ್ ಟೋಬ್ಗೇ, ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಸೇರಿದಂತೆ ಹಲವು ನಾಯಕರಿಗೆ ಆಹ್ವಾನ ನೀಡಲಾಗಿದೆ. ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಬಗ್ಗೆ ಇನ್ನು ಅವರು ದೃಢಪಡಿಸಿಲ್ಲ.
Post a comment
Log in to write reviews