ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಈಗಾಗಲೇ ಅಬ್ಬರಿಸುತ್ತಿದ್ದು ಕರಾವಳಿ ಜಿಲ್ಲೆಯಲ್ಲಿ ಇನ್ನೂ ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದೆ. ಗುರುವಾರದಿಂದ ಮುಂದಿನ ಐದು ದಿನಗಳ ಕಾಲ ಹವಾಮಾನ ಇಲಾಖೆ ಭಾರಿ ಮಳೆ ಬೀಳುವ ಎಚ್ಚರಿಕೆ ನೀಡಿದ್ದು ಕರಾವಳಿ ಜಿಲ್ಲೆಗಳಾದ ಮಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಬೀದರ್ ಧಾರವಾಡ ಜಿಲ್ಲೆಗಳಿಗೆ ಜೂನ್ 22 ಮತ್ತು 23ರಂದು ಎಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಕಾಲ ಕೊಡಗು ಸಿಡಿಲಿನ ಸಾಹಿತ ಮಳೆ ಆಗುವ ಸಾಧ್ಯತೆ ಇದ್ದು ಗರಿಷ್ಠ ಮತ್ತು ಕನಿಷ್ಠ ತಾಪಮಾನ 31 ಡಿಗ್ರಿ ಮತ್ತು 21 ಡಿಗ್ರಿ ಇರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
Post a comment
Log in to write reviews