ಬೆಂಗಳೂರು: ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರುವಾಗಿದ್ದು, ಈ ಹಿನ್ನಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಗಳವಾರ ಮತ್ತೆ ಬುಧವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಬಿರುಗಾಳಿ 40 ರಿಂದ 50 ಕಿಲೋಮೀಟರ್ ಪ್ರತಿ ಗಂಟೆಯ ವೇಗದಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸಲಿದೆ. ಅಲ್ಲಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳೀಯ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ.
Post a comment
Log in to write reviews