Samayanews.

Samayanews.

2024-12-24 12:52:12

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

8 ಜಿಲ್ಲೆಗಳಿಗೆ ಸೆಪ್ಟೆಂಬರ್‌ 5 ರವರೆಗೆ ಭಾರಿ ಮಳೆ ಮುನ್ಸೂಚನೆ ನೀಡಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು:  ಇಂದಿನಿಂದ ಸೆ.5 ರವರೆಗೆ ಭಾರಿ ಮಳೆ ಬೀಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದ ಎಂಟು ಜಿಲ್ಲೆಗಳಾದ ಬೀದರ್, ರಾಯಚೂರು, ಕಲಬುರಗಿ, ವಿಜಯಪುರ, ಯಾದಗಿರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ ಎನ್ನಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ ಮಳೆಯಾಗುತ್ತಿದೆ. ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶವಿದೆ. ಹೆಚ್​ಎಎಲ್​ನಲ್ಲಿ 29.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನೂ ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ರಾಮನಗರ, ವಿಜಯನಗರ, ಕೊಡಗು, ಹಾಸನ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಗದಗ, ಧಾರವಾಡ, ಬಾಗಲಕೋಟೆ ಹಾಗೂ ಬೆಳಗಾವಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

img
Author

Post a comment

No Reviews