Samayanews.

Samayanews.

2024-12-24 12:17:29

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಪಘಾತದಲ್ಲಿ ಯುವ ಆಟಗಾರ ಮುಶೀರ್ ಖಾನ್‌ಗೆ ಗಂಭೀರ ಗಾಯ….!

ಮುಂಬೈ ತಂಡದ ಯುವ ಬ್ಯಾಟರ್ ಮುಶೀರ್ ಖಾನ್ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ತಂದೆ ನೌಶನ್ ಖಾನ್ ಅವರೊಂದಿಗೆ ವಾಹನದಲ್ಲಿ ಅಜಂಗಢದಿಂದ ಲಕ್ನೋಗೆ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿದೆ. ಮುಶೀರ್ ಖಾನ್ ಇತ್ತೀಚೆಗೆ ನಡೆದ ದುಲೀಪ್ ಟ್ರೋಫಿ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಇನ್ನು ಮುಂಬರುವ ಇರಾನಿ ಕಪ್ ಪಂದ್ಯದಲ್ಲಿ ಮುಶೀರ್ ಖಾನ್ ಮುಂಬೈ ಪರ ಕಣಕ್ಕಿಳಿಯಬೇಕಿತ್ತು. ಆದರೀಗ ಗಾಯಗೊಂಡ ಕಾರಣ ಅವರು ಅಕ್ಟೋಬರ್ 1 ರಿಂದ ಶುರುವಾಗಲಿರುವ ಇರಾನಿ ಕಪ್ನಿಂದ ಹೊರಗುಳಿಯುವುದು ಬಹುತೇಕ ಖಚಿತ. ಅಲ್ಲದೆ ರಣಜಿ ಟೂರ್ನಿಯ ಆರಂಭಿಕ ಪಂದ್ಯಗಳಿಗೂ ಅವರು ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಈವರೆಗೆ 9 ಪಂದ್ಯಗಳನ್ನಾಡಿರುವ ಮುಶೀರ್ ಖಾನ್ 3 ಶತಕ ಹಾಗೂ 1 ಅರ್ಧಶತಕದೊಂದಿಗೆ ಒಟ್ಟು 716 ರನ್ ಕಲೆಹಾಕಿದ್ದಾರೆ. ಅಲ್ಲದೆ ಕಳೆದ ಬಾರಿ ರಣಜಿ ಟ್ರೋಫಿ ಫೈನಲ್ನಲ್ಲಿ ಮುಂಬೈ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಮುಶೀರ್ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿಯೇ ಟೀಮ್ ಇಂಡಿಯಾ ಆಟಗಾರ ಸರ್ಫರಾಝ್ ಖಾನ್ ಅವರ ಕಿರಿಯ ಸಹೋದರ ಮುಶೀರ್ ಖಾನ್ ಅವರನ್ನು ಮುಂಬರುವ ಆಸ್ಟ್ರೇಲಿಯಾ ಪ್ರವಾಸದ ವೇಳೆ ಭಾರತ ಎ ತಂಡಕ್ಕೆ ಆಯ್ಕೆ ಮಾಡಲಾಗುತ್ತದೆ ಎನ್ನಲಾಗಿತ್ತು. ಆದರೀಗ ಗಾಯದ ಕಾರಣ ಯುವ ಆಟಗಾರ ಇರಾನಿ ಕಪ್ ಹಾಗೂ ರಣಜಿ ಟೂರ್ನಿ ಪಂದ್ಯಗಳಿಂದ ಹೊರಗುಳಿಯುವಂತಾಗಿದೆ.

 

young-player-mushir-khan-injured-in-an-accident

img
Author

Post a comment

No Reviews