ಪ್ರಿಯಕರ ಕೈಕೊಟ್ಟ ಹಿನ್ನಲೆಯಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರದ ಯಲ್ಲಾಲಿಂಗ ಕಾಲೋನಿಯಲ್ಲಿ ಇಂದು(ಶನಿವಾರ) ನಡೆದಿದೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕೌಲಗಾ ಗ್ರಾಮದ ಪುಷ್ಪಾ (26) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ.
ಡೆತ್ ನೋಟ್ ಬರೆದಿಟ್ಟು ಪುಷ್ಪಾ ನೇಣಿಗೆ ಕೊರಳೊಡ್ಡಿದ್ದಾಳೆ. ಯುವತಿ ಯಲ್ಲಾಲಿಂಗ್ ಕಾಲೋನಿಯಲ್ಲಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದಳು. ಮೃತ ಪುಷ್ಪಾ UPSC ಪರೀಕ್ಷೆಗೆ ಸಿದ್ಧತೆ ನಡೆಸಿದ್ದಳು.
Post a comment
Log in to write reviews