ಕೆರೆಗೆ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯ ಆಲೂರಿನಲ್ಲಿ ನಡೆದಿದೆ.
ಶಾಲೆಗೆ ರಜೆ ಇರುವುದರಿಂದ ಕೆರೆಗೆ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ನಡೆದಿದೆ. ಮುತ್ತಿಗೆ ಗ್ರಾಮದ ಬಾಲಕರಾದ 13 ವರ್ಷದ ಜೀವನ್, 11 ವರ್ಷದ ಸಾತ್ವಿಕ್, 12 ವರ್ಷದ ವಿಶ್ವ ಹಾಗೂ ಪೃಥ್ವಿ ಮೃತರು ಎಂದು ತಿಳಿದು ಬಂದಿದೆ. ಇನ್ನೊಬ್ಬ 10 ವರ್ಷದ ಬಾಲಕ ಚಿರಾಗ್ ಬದುಕುಳಿದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಲೆಗೆ ರಜೆ ಇರುವುದರಿಂದ ಕೆರೆಗೆ ಮಕ್ಕಳು ಈಜಲು ಹೋಗಿದ್ದರು. ಈ ವೇಳೆ ಮೀನು ಹಿಡಿಯುವ ಮೋಜಿಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಕೆರೆಯಲ್ಲಿ ಮೀನು ಹಿಡಿಯುವುದಕ್ಕೆ ಆಳದ ನೀರಿಗೆ ಇಳಿದಿದ್ದಾರೆ. ಆಗ ಮಕ್ಕಳು ಒಬ್ಬರನ್ನೊಬ್ಬರು ರಕ್ಷಿಸಲು ಹೋಗಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನೀರಲ್ಲಿ ಮುಳುಗಿದ ಬಾಲಕರಿಗಾಗಿ ಹುಡುಕಾಟ ಆರಂಭಿಸಿದೆ. ಇಬ್ಬರ ಬಾಲಕರ ಮೃತದೇಹ ಹೊರತೆಗೆದಿದ್ದಾರೆ.
ಸ್ಥಳಕ್ಕೆ ಆಗಮಿಸಿದ್ದ ಶಾಸಕ ಸಿಮೆಂಟ್ ಮಂಜು ಅವರು ಮಕ್ಕಳ ಶವ ಹೊರತೆಗೆಯುವ ಕಾರ್ಯಾಚರಣೆ ಚುರುಕಾಗಿ ನಡೆಸುವಂತೆ ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಸೂಚಿಸಿದರು. ಮತ್ತು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.
Post a comment
Log in to write reviews